ಇಂದಿನಿಂದ ಮೂರು ದಿನಗಳ ಕಾಲ ಅರಮನೆ ಮೈದಾನದಲ್ಲಿ ನಡೆಯಲಿರುವ ಸಮಾವೇಶಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಸಚಿವ ಮುರುಗೇಶ್ ನಿರಾಣಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.
ಮೂರು ದಿನಗಳ ಇನ್ವೆಸ್ಟ್ ಕರ್ನಾಟಕ ಸಮ್ಮೇಳನ ಅತ್ಯಂತ ಯಶಸ್ವಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಇನ್ವೆಸ್ಟ್ ಕರ್ನಾಟಕ ಇಡೀ ಜಗತ್ತಿನ ಗಮನವನ್ನು ಸೆಳೆಯಲಿದೆ. ಜಗತ್ತಿನ ಹೂಡಿಕೆಯೂ ಇಲ್ಲಿಗೆ ಬರುತ್ತಿದೆ.
ಕರ್ನಾಟಕದಲ್ಲಿ ಒಳ್ಳೆಯ ವಾತಾವರಣ ಇದೆ. ಮುಂದಿನ 5 ವರ್ಷಗಳ ಬೆಳವಣಿಗೆಗೆ ಒಂದು ಭದ್ರ ಬುನಾದಿಯನ್ನು ಹಾಕಲಿದೆ. ಇದೊಂದು ಬಹಳ ಮಹತ್ವದ ಸಮ್ಮೇಳನ. ಎಲ್ಲಾ ಜಾಗತಿಕ ಹಾಗೂ ದೇಶದ ಎಲ್ಲ ಬಂಡವಾಳ ಹೂಡಿಕೆದಾರರಿಗೆ, ಶಿಕ್ಷಣ ಸಂಸ್ಥೆಗಳು, ತಂತ್ರಜ್ಞಾನ ಹಾಗೂ ಐ.ಟಿ ಬಿಟಿ ಪರಿಣಿತರಿಗೆ, ಸ್ಟಾರ್ಟ್ ಗಳಿಗೆ ಹಾಗೂ ಯುವ ಇಂಜಿನಿಯರ್ ಗಳಿಗೆ, ತಂತ್ರಜ್ಞರು ಇದರಲ್ಲಿ ಭಾಗವಹಿಸಿದ್ದಾರೆ. 5 ಲಕ್ಷ ಕೋಟಿಗೂ ಅಧಿಕ ಬಂಡವಾಳ ಹರಿದು ಬರುವ ನಿರೀಕ್ಷೆ ಇದ್ದು, ಕೋವಿಡ್ ನಂತರದ ಕರ್ನಾಟಕದಲ್ಲಿ ನಡೆಯುತ್ತಿರುವ ಬೃಹತ್ ಸಮಾವೇಶ ಇದಾಗಿದೆ. 5 ಲಕ್ಷ ಉದ್ಯೋಗ ಸೃಷ್ಟಿಯಾಗುವ ಭರವಸೆಯಿದೆ ಎಂದರು.