alex Certify BIG NEWS: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಕಾರು, ಬೈಕ್ ಗಳ ಮೇಲೆ ಉರುಳಿಬಿದ್ದ ಬೃಹತ್ ಮರಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ; ಕಾರು, ಬೈಕ್ ಗಳ ಮೇಲೆ ಉರುಳಿಬಿದ್ದ ಬೃಹತ್ ಮರಗಳು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿರುಗಾಳಿ, ಗುಡುಗು ಸಹಿತ ಆಲಿಕಲ್ಲು ಮಳೆಯಾಗುತ್ತಿದ್ದು, ಹಲವೆಡೆ ಬೃಹತ್ ಮರಗಳು ವಾಹನಗಳ ಮೇಲೆ ಬಿದ್ದಿರುವ ಘಟನೆ ನಡೆದಿದೆ.

ಕುಮಾರಕೃಪಾ ರಸ್ತೆಯ ಚಿತ್ರಕಲಾ ಪರಿಷತ್ ಮುಂಭಾಗ ಬೃಹತ್ ಮರಗಳು ಕಾರು, ಬೈಕ್ ಗಳ ಮೇಲೆ ಬಿದ್ದಿದ್ದು, ವಾಹನಗಳು ಸಂಪೂರ್ಣ ಜಖಂಗೊಂಡಿವೆ.

ಬೆಂಗಳೂರಿನ ಮೆಜೆಸ್ಟಿಕ್, ಕೆ.ಆರ್. ಮಾರುಕಟ್ಟೆ, ಮಲ್ಲೇಶ್ವರಂ, ಕಾಮಾಕ್ಷಿಪಾಳ್ಯ, ಗಿರಿನಗರ, ಆರ್.ಆರ್.ನಗರ, ಜಯನಗರ, ವಿಜಯನಗರ, ಮಲ್ಲೇಶ್ವರಂ, ಯಶವಂತಪುರ, ಶೇಷಾದ್ರಿಪುರಂ, ಮೇಖ್ರಿ ಸರ್ಕಲ್, ಜೆ.ಪಿ.ನಗರ ಸೇರಿದಂತೆ ಮಹಾನಗರದಾದ್ಯಂತ ಬಿರುಗಾಳಿ, ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ.

ಭಾರಿ ಮಳೆಯಿಂದಾಗಿ ಬೆಂಗಳೂರಿನ ಪ್ರಮುಖ ರಸ್ತೆಗಳು ನದಿಯಂತಾಗಿದ್ದು, ಬೀದಿಬದಿ ವ್ಯಾಪಾರಿಗಳು, ವಾಹನ ಸವಾರರು ಪರದಾಟ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...