ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ವೈಟ್ ಫೀಲ್ಡ್ ನಲ್ಲಿ ಗ್ಯಾರೇಜ್ ಹಾಗೂ ಹಾಸಿಗೆ ಅಂಗಡಿಗೆ ಬೆಂಕಿ ಬಿದ್ದ ಪರಿಣಾಮ ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಎರಡು ಅಗ್ನಿ ಶಾಮಕ ವಾಹನ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.
ಸಧ್ಯದ ಮಾಹಿತಿ ಪ್ರಕಾರ ಯಾವುದೇ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ.