alex Certify BIG NEWS: ಬೆಂಗಳೂರಿನಲ್ಲಿ ಮತಾಂತರ ಆರೋಪ; ಮನೆಯಲ್ಲಿ 70-80 ಮಕ್ಕಳನ್ನು ಸೇರಿಸಿ ಪ್ರಾರ್ಥನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನಲ್ಲಿ ಮತಾಂತರ ಆರೋಪ; ಮನೆಯಲ್ಲಿ 70-80 ಮಕ್ಕಳನ್ನು ಸೇರಿಸಿ ಪ್ರಾರ್ಥನೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಕ್ಕಳನ್ನು ಮತಾಂತರ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಮನೆಯಲ್ಲಿ 70-80 ಮಕ್ಕಳನ್ನು ಸೇರಿಸಿ ಕ್ರೈಸ್ತ ಧರ್ಮದ ಪ್ರಾರ್ಥನೆ ಮಾಡಿಸಿರುವ ಬಗ್ಗೆ ವಿಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಆರ್.ಎಸ್.ಎಸ್. ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದಾರೆ.

ನಾರಾಯಣಸ್ವಾಮಿ ಎಂಬುವವರ ಮನೆಯಲ್ಲಿ ಮಕ್ಕಳನ್ನು ಸೇರಿಸಿ ಪ್ರಾರ್ಥನೆ ಮಾಡಿಸಿ, ಮತಾಂತರಕ್ಕೆ ಯತ್ನಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಆರ್.ಎಸ್.ಎಸ್ ದೂರಿನ ಹಿನ್ನೆಲೆಯಲ್ಲಿ ನಾರಾಯಣಸ್ವಾಮಿ ಮನೆಗೆ ಭೇಟಿ ನೀಡಿದ ಪೊಲಿಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮನೆಯಲ್ಲಿ ಕೇವಲ ಪ್ರಾರ್ಥನೆ ಮಾಡಿದ್ದಾರೆ. ಆದರೆ ಮತಾಂತರ ಮಾಡಿಲ್ಲ ಎಂದು ತಿಳಿದುಬಂದಿದೆ.

BIG BREAKING: ಉಪ ಚುನಾವಣೆಗೆ ಮುಹೂರ್ತ ಫಿಕ್ಸ್ – ಅ. 30 ರಂದು ಹಾನಗಲ್, ಸಿಂದಗಿ ಬೈಎಲೆಕ್ಷನ್

ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಪ್ರಾರ್ಥನೆ ಮಾಡಿರುವ ಹಿನ್ನೆಲೆಯಲ್ಲಿ ನಾರಾಯಣಸ್ವಾಮಿ ವಿರುದ್ಧ ಎನ್ಡಿಎಂಎ ಕೇಸ್ ದಾಖಲಿಸಿಕೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...