ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಾಗೂ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಟಫ್ ರೂಲ್ಸ್ ಜಾರಿಗೆ ಬರುವ ಸಾಧ್ಯತೆ ದಟ್ಟವಾಗಿದೆ.
ಪ್ರಮುಖವಾಗಿ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಿಸಲು ಬಿಬಿಎಂಪಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಲು ಚಿಂತನೆ ನಡೆಸಿದ್ದು, ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆಗೆ ಬ್ರೇಕ್ ಬೀಳುವ ಸಾಧ್ಯತೆ ಇದೆ.
ಡಿಸೆಂಬರ್ 25 ರಿಂದ ಜನವರಿ 5ರವರೆಗೆ 17 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಗೆ ಬಿಬಿಎಂಪಿ ಚಿಂತನೆ ನಡೆಸಿದೆ. ಈಗಗಾಲೇ ದಕ್ಷಿಣ ಆಫ್ರಿಕಾದಿಂದ 75 ಜನರು ಬೆಂಗಳೂರಿಗೆ ಆಗಮಿಸಿದ್ದು, ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೇ ಇಬ್ಬರ ಪೈಕಿ ಓರ್ವರಲ್ಲಿ ಡೆಲ್ಟಾಗಿಂತ ಭಿನ್ನವಾದ ವೈರಸ್ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಲ್ಯಾಬ್ ವರದಿಗಾಗಿ ಕಾಯಲಾಗುತ್ತಿದೆ.
ಇಂಧನ ದರ ಏರಿಕೆ ಮಧ್ಯೆ ತಮಾಷೆಗೆ ಕಾರಣವಾಗಿದೆ IOCL ನ ಈ ಜಾಹೀರಾತು
ಒಟ್ಟಾರೆ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಮೂರನೇ ಅಲೆ ಆತಂಕ ಹೆಚ್ಚುತ್ತಿದ್ದು, ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಈ ಬಾರಿಯೂ ಕೊರೊನಾ ಅಡ್ಡಿಯುಂಟು ಮಾಡಲಿದೆ. ಕೋವಿಡ್ ಕಟ್ಟಿಹಾಕಲು ರಾಜ್ಯದಲ್ಲಿ ಮತ್ತೆ ಬಿಗಿ ಕ್ರಮಗಳನ್ನು ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ.