alex Certify BIG NEWS: ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ವಿಚಾರ; ಸ್ಪಷ್ಟನೆ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ವಿಚಾರ; ಸ್ಪಷ್ಟನೆ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸ್ಥಗಿತಗೊಳಿಸಲಾಗಿದ್ದ ವಾಹನಗಳ ಟೋಯಿಂಗ್ ಮತ್ತೆ ಆರಂಭವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ನಗರದಲ್ಲಿ ಸ್ಥಗಿತಗೊಂಡಿದ್ದ ಟೋಯಿಂಗ್ ಪ್ರಾರಂಭಿಸುವ ಬಗ್ಗೆ ಸಧ್ಯಕ್ಕೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ತಿಳಿಸಿದರು.

ನಗರದಲ್ಲಿ ಸಾರ್ವಜನಿಕ ಸ್ನೇಹಿ ಸುಗಮ ವಾಹನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸುವ ಬಗ್ಗೆ ವಿಸ್ತೃತ ಚರ್ಚೆ ಹಾಗೂ ತಜ್ಞರ ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುತ್ತದೆ ಮುಖ್ಯಮಂತ್ರಿಗಳು ಕೂಡ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಆದರೆ ಇನ್ನೂ ಅಂತಿಮ ತೀರ್ಮಾನಕ್ಕೆ ಬಂದಿಲ್ಲ. ಟೋಯಿಂಗ್ ಬಗ್ಗೆ ದೂರು ಹಾಗೂ ಜನಾಕ್ರೋಶ ವ್ಯಕ್ತವಾದ ಕಾರಣ ಸ್ಥಗಿತಗೊಳಿಸಲಾಗಿತ್ತು. ಹಾಗಾಗಿ ಸಧ್ಯಕ್ಕೆ ಟೋಯಿಂಗ್ ಪ್ರಾರಂಭಿಸುವ ವಿಚಾರವಿಲ್ಲ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...