alex Certify BIG NEWS: ಬೆಂಗಳೂರಿನಲ್ಲಿ ಮತ್ತೊಂದು ಭಯಾನಕ ಸ್ಫೋಟ; ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಬ್ಲಾಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನಲ್ಲಿ ಮತ್ತೊಂದು ಭಯಾನಕ ಸ್ಫೋಟ; ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಬ್ಲಾಸ್ಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅಗ್ನಿ ದುರಂತಗಳು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಇದೀಗ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಅತ್ತಿಬೆಲೆಯ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಲ್ಲಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ.

ಫ್ಯಾಕ್ಟರಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಕೆಮಿಕಲ್ ಘಾಟು ತುಂಬಿಕೊಂಡಿದ್ದು, ದಟ್ಟ ಹೊಗೆ ಆವರಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ ಕೆಮಿಕಲ್ ಘಾಟಿನಿಂದ ಕರ್ಯಾಚರಣೆಗೆ ಅಡ್ಡಿಯುಂಟಾಗುತ್ತಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...