ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರಿಂಟಿಂಗ್ ಪ್ರೆಸ್ ಒಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿ ಹೊತ್ತಿ ಉರಿದಿದೆ.
ಬೆಂಗಳೂರಿನ ಸುಮನಹಳ್ಳಿ ಬ್ರಿಡ್ಜ್ ಬಳಿಯ ಪ್ರಿಂಟಿಂಗ್ ಪ್ರೆಸ್ ನಲ್ಲಿ ಈ ಅವಘಡ ಸಂಭವಿಸಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ಸಂಭವಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದು, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.