ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿರುವ ಘಟನೆ ವಿಠಲನಗರದಲ್ಲಿ ನಡೆದಿದೆ.
ವಿಠಲನಗರದ ಜಿಂಕೆ ಪಾರ್ಕ್ ಬಳಿಯ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, ಕ್ಷಣಾರ್ಧದಲ್ಲಿ ಮನೆಯ ತುಂಬೆಲ್ಲ ಬೆಂಕಿ ಆವರಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಲ್ಲ. ಕೆಂಪೇಗೌಡ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.