ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಳೆಗೆ ಟಿಕ್ಕಿ ಯುವತಿ ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಮತ್ತೊಂದು ಬಲಿಯಾಗಿದೆ. ಮಳೆಯ ರಭಸಕ್ಕೆ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆಯಾಗಿದೆ.
ಬ್ಯಾಟರಾಯನಪುರ ರಾಜಕಾಲುವೆ ಬಳಿ 31 ವರ್ಷದ ಲೋಕೇಶ್ ಎಂಬ ಯುವಕನ ಶವ ಪತ್ತೆಯಾಗಿದೆ. ಕೆ.ಪಿ.ಅಗ್ರಹಾರ ಬಳಿಯ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಯುವಕ ಇಂದು ಶವವಾಗಿ ಪತ್ತೆಯಾಗಿದ್ದಾನೆ.
ಮರಣೋತ್ತರ ಪರೀಕ್ಷೆಗೆ ಯುವಕನ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆದಾಖಲಿಸಲಾಗಿದೆ.