ಬೆಂಗಳೂರು: ಚೀನಾ, ಅಮೆರಿಕಾ, ಜಪಾನ್ ಸೇರಿದಂತೆ ವಿದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಕೊರೊನಾತಂಕ ಆರಂಭವಾಗಿದೆ. ಬೆಂಗಳೂರಿಗೆ ವಿದೇಶಗಳಿಂದ ಆಗಮಿಸುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಕೋವಿಡ್ ಹೆಚ್ಚಾಗುವ ಭೀತಿ ಶುರುವಾಗಿದೆ.
ಕ್ರಿಸ್ ಮಸ್, ಹೊಸವರ್ಷಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಕೋವಿಡ್ ಉಲ್ಬಣಗೊಳ್ಳುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ ಮಾಸ್ಕ್ ಕಡ್ಡಾಯ ಮಾಡಲು ಬಿಬಿಎಂಪಿ ಚಿಂತನೆ ನಡೆಸಿದೆ.
ಮಾಲ್, ಥಿಯೇಟರ್, ವಿಮಾನ ನಿಲ್ದಾಣ, ರೈಲು ನಿಲ್ದಾಣ, ಮಾರ್ಕೆಟ್, ಜನನಿಬಿಡ ಪ್ರದೇಶಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಬೇಕು ಎಂದು ಬಿಬಿಎಂಪಿ ಕೋವಿಡ್ ಸಲಹಾ ಸಮಿತಿ ಬಳಿ ಮನವಿ ಮಾಡಿದೆ. ಈಗಾಗಲೇ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಕ್ದಾಣದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿಗಳು ಪ್ರಯಾಣಿಕರಿಗೆ ಸ್ಕ್ರೀನಿಂಗ್ , ತಪಾಸಣೆ ಆರಂಭಿಸಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಯಲಿದ್ದು, ಹೊಸ ಗೈಡ್ ಲೈನ್ ಪ್ರಕಟವಾಗುವ ಸಾಧ್ಯತೆ ಇದೆ.