ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಬಿಜೆಪಿ ನಾಯಕರ ಪರ ಅಬ್ಬರದ ಪ್ರಚಾರ ನಡೆಸಿದ್ದು, ಬೆಂಗಳೂರಿನಲ್ಲಿ ಮೇ 6ರಂದು ಎರಡು ರೋಡ್ ಶೋಗಳಲ್ಲಿ ಭಾಗಿಯಾಗಲಿದ್ದಾರೆ.
ಈ ಕುರಿತು ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದು, ಮೇ 6 ರಂದು ಕರ್ನಾಟಕ ಸಂಕಲ್ಪ ಹೆಸರಿನಲ್ಲಿ ಪ್ರಧಾನಿ ಮೋದಿ ಬೆಂಗಳೂರಿನಲ್ಲಿ ರ್ಯಾಲಿ ನಡೆಸಲಿದ್ದಾರೆ. ಸಾರ್ವಜನಿಕರಿಗೆ ಸಮಸ್ಯೆಯಾಗಬಾರದು ಎಂಬ ಕಾರಣಕ್ಕೆ ಶನಿವಾರ ರ್ಯಾಲಿ ಆಯೋಜಿಸಲಾಗಿದೆ. ಕೆಲ ರಸ್ತೆ ಸಂಚಾರಗಳು ಬಂದ್ ಆಗಲಿವೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಮೇ 6 ರಂದು ಎರಡು ರ್ಯಾಲಿ ನಡೆಸಲಿದ್ದು, ಯಾರ್ಲಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಯಾಗದಂತೆ ಪೊಲೀಸರೊಂದಿಗೆ ಚರ್ಚಿಸಲಾಗಿದೆ. ಮೊದಲ ರೋಡ್ ಶೋ ಸಿ.ವಿ. ರಾಮನ್ ನಗರದಿಂದ ಬ್ರಿಗೇಡ್ ರಸ್ತೆಯ ವಾರ್ ಮೆಮೋರಿಯಲ್ ವರೆಗೆ ನಡೆಯಲಿದೆ. ಬೆಳಿಗ್ಗೆ 10 ಗಂಟೆಯಿಂದ 1 ಕಿ.ಮೀ. ವರೆಗೆ ನಡೆಯಲಿದೆ.
ಸಂಜೆ 6 ಗಂಟೆಗೆ ನಡೆಯಲಿರುವ ರೋಡ್ ಶೋ ಜೆ.ಪಿ.ನಗರದ ಆರ್ ಬಿ ಐ ರೋಡ್ ನಿಂದ ಆರಂಭವಾಗಿ ಬೊಮ್ಮನಹಳ್ಳಿ, ಜೆ.ಪಿ.ನಗರ, ಜಯನಗರ, ಅರಬಿಂದೋ ಮಾರ್ಗ, ಕೂಲ್ ಜಾಯಿಂಟ್, ಮಯ್ಯಾಸ್, ಕರಿಸಂದ್ರ, ಸೌತ್ ಎಂಡ್ ಸರ್ಕಲ್, ನೆಟ್ಟಕಲ್ಲಪ್ಪ ಸರ್ಕಲ್, ಎನ್ ಆರ್ ಕಾಲೋನಿ, ಬಸವನಗುಡಿ, ರಾಮಕೃಷ್ಣ ಆಶ್ರಮ, ಉಮಾ ಥಿಯೇಟರ್, ಟಿ. ಆರ್ ಮಿಲ್, ಸಿರ್ಸಿ ಸರ್ಕಲ್, ಈಟಾ ಮಾಲ್, ಮಾಗಡಿ ರಸ್ತೆ, ಬಸವೇಶ್ವರ ನಗರ, ವೆಸ್ಟ್ ಆಫ್ ಕಾರ್ಡ್ ರೋಡ್, ಮೋದಿ ಆಸ್ಪತ್ರೆ, ನವರಂಗ್ ಸರ್ಕಲ್, ಸಂಪಿಗೆ ರಸ್ತೆ, ಮಲ್ಲೇಶ್ವರಂ, ಮಾರಮ್ಮ ದೇವಸ್ಥಾನದವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧವಿರಲಿದ್ದು, ಬದಲಿ ಮಾರ್ಗಕ್ಕೆ ಸೂಚಿಸಲಾಗುತ್ತಿದೆ ಎಂದು ತಿಳಿಸಿದರು.