ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಮೂರನೇ ಅಲೆ ಭೀತಿ ಆರಂಭವಾಗಿದೆ. ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆ 108ಕ್ಕೆ ಏರಿಕೆಯಾಗಿದ್ದು, ಅಪಾರ್ಟ್ ಮೆಂಟ್ ನಿವಾಸಿಗಳಲ್ಲಿ ಸೋಂಕು ವೇಗವಾಗಿ ಹರಡುತ್ತಿದೆ.
ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮುಂಜಾಗೃತಾ ಕ್ರಮಕೈಗೊಳ್ಳುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಕರ್ನಾಟಕ-ತಮಿಳುನಾಡು, ಕೇರಳ-ಕರ್ನಾಟಕ ಗಡಿಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಕೋವಿಡ್ ನೆಗೆಟಿವ್ ವರದಿ ಹಾಗೂ ವ್ಯಾಕ್ಸಿನ್ ಪಡೆದವರಿಗೆ ಮಾತ್ರ ಬೆಂಗಳೂರಿಗೆ ಬರಲು ಅವಕಾಶ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.
ಟೊಕಿಯೋ ಒಲಿಂಪಿಕ್ಸ್: ಫೈನಲ್ ಗೆ ಲಗ್ಗೆಯಿಟ್ಟ ಕಮಲ್ ಪ್ರೀತ್ ಕೌರ್
ಜನರು ಗುಂಪು ಸೇರದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಹೆಚ್ಚು ಹೆಚ್ಚು ಬೆಡ್, ಆಕ್ಸಿಜನ್ ಪ್ಲಾಂಟ್ ಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಇನ್ನು ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಜಾರಿ ಬಗ್ಗೆ ಸರ್ಕಾರದ ನಿಟ್ಟಿನಲ್ಲಿ ಚರ್ಚೆ ನಡೆದಿದೆ ಎಂದರು. ಒಟ್ಟಾರೆ ಕೊರೊನಾ ಮೂರನೇ ಅಲೆ ಆತಂಕದ ನಡುವೆ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ರಾಜ್ಯದಲ್ಲಿ ಮತ್ತೆ ಬಿಗಿ ಕ್ರಮದ ಲಾಕ್ ಡೌನ್ ಜಾರಿಯಾಗುವ ಸಾಧ್ಯತೆ ಇದೆ.