alex Certify BIG NEWS: ಬೆಂಗಳೂರಿನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರನ ಬಂಧನ; ಜಮ್ಮು-ಕಾಶ್ಮೀರ ಪೊಲೀಸರ ಕಾರ್ಯಾಚರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರನ ಬಂಧನ; ಜಮ್ಮು-ಕಾಶ್ಮೀರ ಪೊಲೀಸರ ಕಾರ್ಯಾಚರಣೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಾಶ್ಮೀರ ಮೂಲದ ಉಗ್ರನನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ.

ಕಾಶ್ಮೀರ ಮೂಲದ ತಾಲಿಬ್ ಹುಸೇನ್ ಎಂಬ ಉಗ್ರ ತಾಲಿಕ್ ಎಂದು ಹೆಸರು ಬದಲಿಸಿಕೊಂಡು ಬೆಂಗಳೂರಿನ ಶ್ರೀರಾಂಪುರದಲ್ಲಿ ಮಸೀದಿ ಪಕ್ಕದಲ್ಲಿ ರೂಮ್ ಪಡೆದು ವಾಸವಾಗಿದ್ದ. ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿದ ಜಮ್ಮು-ಕಾಶ್ಮೀರ ಪೊಲೀಸರು ಇದೀಗ ಉಗ್ರ ತಾಲಿಬ್ ಹುಸೇನ್ (38)ನ್ನು ಬಂಧಿಸಿದ್ದಾರೆ.

8-10 ವರ್ಷಗಳ ಹಿಂದೆಯೇ ಕಾಶ್ಮೀರದಿಂದ ಬೆಂಗಳೂರಿಗೆ ಪಲಾಯನಗೊಂಡು ಹೆಸರು ಬದಲಿಸಿಕೊಂಡು ಪತ್ನಿ ಹಾಗೂ ಮೂವರು ಮಕ್ಕಳೊಂದಿಗೆ ಶ್ರೀರಾಂಪುರದಲ್ಲಿ ನೆಲೆಸಿದ್ದ. ಬಿಎನ್ ಎಲ್ ಆರ್ ನಲ್ಲಿ ಲೋಡಿಂಗ್, ಅನ್ ಲೋಡಿಂಗ್ ಕೆಲಸ ಮಾಡುತ್ತಿದ್ದ. ಮೂಲತ; ಜಮ್ಮು-ಕಾಶ್ಮೀರದವನಾಗಿದ್ದ ತಾಲಿಬ್, ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಆಗಿದ್ದ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...