ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ 3ನೇ ಅಲೆ ಆರಂಭವಾಗಿರುವ ಆತಂಕ ಶುರುವಾಗಿದೆ. ಅಪಾರ್ಟ್ ಮೆಂಟ್ ನಿವಾಸಿಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಮನೆಗಳನ್ನು ಸೀಲ್ ಡೌನ್ ಮಾಡಲಾಗುತ್ತಿದೆ.
ಯಶವಂತಪುರದ ಬೆಲ್ ಅಪಾರ್ಟ್ ಮೆಂಟ್ ನಲ್ಲಿ 16 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಅಪಾರ್ಟ್ ಮೆಂಟ್ ನ ಎ ಬ್ಲಾಕ್ ನಲ್ಲಿರುವ 72 ಮನೆಗಳನ್ನು ಸೀಲ್ ಡೌನ್ ಮಾಡಲಾಗಿದ್ದು 300ಕ್ಕೂ ಹೆಚ್ಚು ಜನರನ್ನು ಹೋಂ ಐಸೋಲೇಷನ್ ಮಾಡಲಾಗಿದೆ. ಯಲಹಂಕದ ಸುರಭಿ ಲೆಔಟ್ ನಲ್ಲಿರುವ ಅಪಾರ್ಟ್ ಮೆಂಟ್ ಒಂದರಲ್ಲಿ ಒಂದೇ ಮನೆಯ ಐವರಲ್ಲಿ ಕೋವಿಡ್ ದೃಢಪಟ್ಟಿದ್ದು, ಇಡೀ ಅಪಾರ್ಟ್ ಮೆಂಟ್ ಸೀಲ್ ಡೌನ್ ಮಾಡಲಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ ತಿಳಿಸಿದ್ದಾರೆ.
BIG NEWS: ಕೇರಳದಲ್ಲಿ 3ನೇ ಅಲೆ ಸ್ಫೋಟ; ಆಗಸ್ಟ್ ನಲ್ಲಿ ರಾಜ್ಯಕ್ಕೂ ಅಪ್ಪಳಿಸುವ ಭೀತಿ; ಈಗಲಾದರೂ ಮುಂಜಾಗೃತೆ ಕೈಗೊಳ್ಳಿ; ಸರ್ಕಾರಕ್ಕೆ HDK ಸಲಹೆ
ಧಾರವಾಡ ಹಾಗೂ ದೆಹಲಿಯಿಂದ ಬಂದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಂದು ಮನೆಯಲ್ಲಿ ಮೂವರಲ್ಲಿ ಪಾಸಿಟಿವ್ ಬಂದರೆ ಮನೆಯನ್ನು ಸೀಲ್ ಡೌನ್ ಮಾಡಲಾಗುತ್ತಿದ್ದು, ಏರಿಯಾದಲ್ಲಿ ಜನರು ಓಡಾಟ ನಡೆಸದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಈಗಲೇ ಮುಂಜಾಗೃತಾ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿದ್ದಾರೆ.