alex Certify BIG NEWS: ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು; ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್; ಸಭೆ ಬಳಿಕ ನಿಯಂತ್ರಣಕ್ಕೆ ಕ್ರಮ ಎಂದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು; ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್; ಸಭೆ ಬಳಿಕ ನಿಯಂತ್ರಣಕ್ಕೆ ಕ್ರಮ ಎಂದ ಸಿಎಂ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ನಾಲ್ಕನೇ ಅಲೆ ಆತಂಕ ಎದುರಾಗಿದೆ.

ನಿನ್ನೆ ಒಂದೇ ದಿನದಲ್ಲಿ ಬೆಂಗಳೂರಿನಲ್ಲಿ 132 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಸಿಲಿಕಾನ್ ಸಿಟಿಯಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಏಪ್ರಿಲ್ 27ರಂದು ಪ್ರಧಾನಿ ಮೋದಿ ಜತೆ ವಿಡಿಯೋ ಕಾನ್ಫರೆನ್ಸ್ ಸಭೆ ಇದ್ದು, ಪ್ರಧಾನಿ ನೀಡಿದ ಸಲಹೆಯಂತೆ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಕೇರಳ, ಮಹಾರಾಷ್ಟ್ರಗಳಲ್ಲಿಯೂ ಕೋವಿಡ್ ಕೇಸ್ ಹೆಚ್ಚುತ್ತಿದೆ. ಬೆಂಗಳೂರಿನಲ್ಲಿಯೂ ಪ್ರಕರಣ ಏರಿಕೆಯಾಗುತ್ತಿದೆ. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಜತೆ ಸಭೆ ನಡೆಯಲಿದ್ದು, ಅವರ ಸಲಹೆ, ಸೂಚನೆ ಮೇರೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಕೋವಿಡ್ 2ನೇ ಅಲೆ ವೇಳೆ ನಿರ್ಲಕ್ಷ್ಯದಿಂದ ಸಮಸ್ಯೆ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ತಜ್ಞರು ಈಗಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ. ಜನರು ಕೂಡ ಜಾಗೃತರಾಗಬೇಕು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...