BIG NEWS: ಬೆಂಗಳೂರಿನ ಪ್ರತಿಷ್ಠಿತ ಶಾಲೆಗೆ ಮತ್ತೆ ಬಾಂಬ್ ಬೆದರಿಕೆ ಕರೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ನಗರದ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿನ ಎಬಿನೈಜರ್ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಶಾಲೆಯ ಇ-ಮೇಲ್ ವಿಳಾಸಕ್ಕೆ ಸಂದೇಶ ರವಾನಿಸಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಬಂದಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಬಾಂಬ್ ಪತ್ತೆದಳ ಧಾವಿಸಿದ್ದು, ಶಾಲೆಯ ಸಿಬ್ಬಂದಿಗಳನ್ನು ಹೊರ ಕಳುಹಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಹಿಂದೆಯೂ ಇದೇ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಆದರೆ ಪರಿಶೀಲನೆ ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ಗೊತ್ತಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read