alex Certify BIG NEWS: ಬೆಂಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ನಾಳೆ ಮುಖ್ಯಮಂತ್ರಿ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ನಾಳೆ ಮುಖ್ಯಮಂತ್ರಿ ಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬೆಂಗಳೂರಿನಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ನಾಳೆ ಮಧ್ಯಾಹ್ನ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಅಗತ್ಯ ಸೂಚನೆಗಳನ್ನು ನೀಡಲಿದ್ದಾರೆ.

ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಭೆ ನಡೆಸಿದ್ದು, ಪ್ರವಾಹ ನಿಯಂತ್ರಣ ಹಾಗೂ ಪರಿಹಾರ ಕಾರ್ಯಗಳ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಳೆದ ಆರು ತಿಂಗಳಿನಿಂದ ನಿರಂತರವಾಗಿ ಮಳೆ ಬಂದ ಕಾರಣ ಹೆಚ್ಚಿನ ಸಮಸ್ಯೆಯಾಗಿದೆ. ಅದರಲ್ಲೂ ಮೂರು ತಿಂಗಳಿನಿಂದ ಅತಿ ಹೆಚ್ಚು ಮಳೆ ಆಗುತ್ತಿದ್ದು, ಇದರಿಂದ ಸಮಸ್ಯೆ ಮತ್ತಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು.

ರಾಜ ಕಾಲುವೆ ನಿರ್ಮಾಣ ಕಾರ್ಯಕ್ಕೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಕಾಮಗಾರಿಗಳು ಆರಂಭವಾಗಬೇಕಿದೆ. ಒಂದೊಮ್ಮೆ ಹೆಚ್ಚುವರಿ ಅನುದಾನ ಅಗತ್ಯ ಇದ್ದರೆ ಅನುದಾನವನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...