
ಬೆಂಗಳೂರು: ಸಿಲಿಕಾನ್ ಸಿಟಿ, ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ. ಜಲಮಂಡಳಿ ಅಗೆದಿದ್ದ ರಸ್ತೆ ಗುಂಡಿಯಲ್ಲಿ ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಎಂ.ಎಸ್. ಪಾಳ್ಯದ ಮುನೇಶ್ವರ ಲೇಔಟ್ ನಲ್ಲಿ ನಡೆದಿದೆ.
27 ವರ್ಷದ ಅಶ್ವಿನ್ ಮೃತ ಯುವಕ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಶ್ವಿನ್ ಮೂಲತಃ ಹಾವೇರಿಯವರಾಗಿದ್ದು, ತಡರಾತ್ರಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಆಯತಪ್ಪಿ ರಸ್ತೆ ಗುಂಡಿಗೆ ಬಿದ್ದಿದ್ದಾರೆ. ರಕ್ತದ ಮಡುವಲ್ಲಿ ಬಿದ್ದಿದ್ದ ಅಶ್ವಿನ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಶ್ವಿನ್ ಸಾವಿಗೆ ಜಲಮಂಡಳಿ ಹಾಗೂ ಬಿಬಿಎಂಪಿಯ ನಿರ್ಲಕ್ಷವೇ ಕಾರಣ ಎಂದು ಅಶ್ವಿನ್ ಸ್ನೇಹಿತರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.