alex Certify BIG NEWS: ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೋರ್ವ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೋರ್ವ ಬಲಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೋರ್ವ ಬಲಿಯಾಗಿದ್ದಾರೆ. ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದ ಬೈಕ್ ಸವಾರನ ಮೇಲೆಯೇ ಟ್ರ್ಯಾಕ್ಟರ್ ಹರಿದಿರುವ ಘಟನೆ ರಾಜಾಜಿನಗರದಲ್ಲಿ ನಡೆದಿದೆ.

ಇಂದು ಮಧ್ಯಾಹ್ನ ನಡೆದಿರುವ ಈ ದುರಂತ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ರಸ್ತೆ ಕಾಮಗಾರಿ ನಡೆಸುತ್ತಿದ್ದ ರಸ್ತೆಯಲ್ಲಿಯೇ ಈ ಅವಘಡ ಸಂಭವಿಸಿದೆ. ಬೈಕ್ ನಲ್ಲಿ ಬರುತ್ತಿದ್ದ ಕುಮಾರ್ ಎಂಬ ವ್ಯಕ್ತಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದಿದ್ದು, ಹಿಂದಿನಿಂದ ಬಂದ ಟ್ರ್ಯಾಕ್ಟರ್ ಆತನ ಮೇಲೆ ಹರಿದಿದೆ.

ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಳೆದ ಮೂರು ತಿಂಗಳಿಂದ ಬಿಬಿಎಂಪಿ ಈ ಭಾಗದಲ್ಲಿ ರಸ್ತೆ ಕಾಮಗಾರಿ ನಡೆಸುತ್ತಿದ್ದು, ಆಮೆಗತಿಯಲ್ಲಿ ಕಾಮಗಾರಿ ನಡೆಸುತ್ತಿದೆ. ರಾಜಾಜಿನಗರದ ಡಿ ಬ್ಲಾಕ್ ನಲ್ಲಿ ಈ ದುರಂತ ಸಂಭವಿಸಿದ್ದು, ಈಗಾಗಲೇ ಇಲ್ಲಿನ ರಸ್ತೆಗುಂಡಿಗಳಿಗೆ ಹಲವರು ಬಿದ್ದು ಕೈ-ಕಾಲು ಮುರಿದುಕೊಂಡಿದ್ದಾರೆ. ಇಂದು ವ್ಯಕ್ತಿಯೋರ್ವರು ಸಾವನ್ನಪ್ಪಿದ್ದಾರೆ. ಇದೆಕ್ಕೆಲ್ಲ ಬಿಬಿಎಂಪಿ ನಿರ್ಲಕ್ಷವೇ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...