ಬೆಂಗಳೂರು: ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರು ಜಿಲ್ಲಾಧಿಕಾರಿ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಈ ವೇಳೆ ಲಂಚ ಪಡೆಯುತ್ತಿದ್ದ ಜಿಲ್ಲಾಧಿಕಾರಿ ಕಚೇರಿ ಮ್ಯಾನೇಜರ್ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಮ್ಯಾನೇಜರ್ ಮಹೇಶ್ 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾಗಿ ಎಸಿಬಿ ಅಧಿಕಾರಿಗಳಿಗೆ ದೂರುದಾರರು ದೂರು ನೀಡಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ 6 ಜನ ಎಸಿಬಿ ಅಧಿಕಾರಿಗಳು ಮಹೇಶ್ ಎಂಬಾತನನ್ನು ಬಂಧಿಸಿದ್ದಾರೆ.
BIG NEWS: ಕಾಂಗ್ರೆಸ್ ಪಕ್ಷದಲ್ಲಿರುವ ಯುವ ನಾಯಕರು ಯಾರು…..? ಆ ಪಕ್ಷದಲ್ಲಿ ಯೌವನ ನಿರ್ಧಾರವಾಗುವುದು 50 ರ ನಂತರವೇ….? BJP ಪ್ರಶ್ನೆ
ದಾಳಿ ವೇಳೆ ಕಚೇರಿಯಲ್ಲಿ ಡಿಸಿ ಜೆ. ಮಂಜುನಾಥ್ ಕೂಡ ಇದ್ದರು. ಜಿಲ್ಲಾಧಿಕಾರಿ ಕಚೇರಿ ಬಾಗಿಲು ಮುಚ್ಚಿ ಎಸಿಬಿ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಮತ್ತೊಂದೆಡೆ ದಾಖಲೆಗಳ ಪರಿಶೀಲನೆ ನಡೆದಿದೆ.