ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ತೆಗೆದುಕೊಳ್ಳುವ ಆರೋಪ ಮಾಡುತ್ತಿರುವ ಪ್ರತಿಪಕ್ಷ ಕಾಂಗ್ರೆಸ್ ಈಗ ತನ್ನ ಪ್ರಚಾರವನ್ನು ಮತ್ತಷ್ಟು ಚುರುಕುಗೊಳಿಸಿದೆ.
ಬೆಂಗಳೂರು ನಗರದಾದ್ಯಂತ PAY CM ಶೀರ್ಷಿಕೆಯ ಪೋಸ್ಟರ್ಗಳನ್ನು ಅಂಟಿಸಲಾಗಿದ್ದು, ಇದರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರವೂ ಇದೆ.
ಈ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಕಾಂಗ್ರೆಸ್ ಪಕ್ಷ ಇತ್ತೀಚೆಗೆ ಬಿಡುಗಡೆ ಮಾಡಿರುವ ‘40% ಕಮಿಷನ್ ಸರ್ಕಾರ’ ವೆಬ್ ಸೈಟ್ ಗೆ ಕರೆದೊಯ್ಯುತ್ತದೆ.
ರಾಜ್ಯದಲ್ಲಿ ಕಳೆದ ಕೆಲವು ತಿಂಗಳಿಂದ ಸರ್ಕಾರದ ವಿರುದ್ಧ ಗುತ್ತಿಗೆದಾರರಿಂದ 40 ಶೇಕಡ ಕಮಿಷನ್ ಪಡೆಯುತ್ತಿರುವ ಆರೋಪ ಕೇಳಿ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಪೋಸ್ಟರ್ಗಳನ್ನು ರೂಪಿಸಲಾಗಿದೆ.