alex Certify BIG NEWS: ಬೆಂಗಳೂರು ನಗರದಾದ್ಯಂತ QR ಕೋಡ್ ಹೊಂದಿರುವ PAY CM ಪೋಸ್ಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರು ನಗರದಾದ್ಯಂತ QR ಕೋಡ್ ಹೊಂದಿರುವ PAY CM ಪೋಸ್ಟರ್

ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ತೆಗೆದುಕೊಳ್ಳುವ ಆರೋಪ ಮಾಡುತ್ತಿರುವ ಪ್ರತಿಪಕ್ಷ ಕಾಂಗ್ರೆಸ್ ಈಗ ತನ್ನ ಪ್ರಚಾರವನ್ನು ಮತ್ತಷ್ಟು ಚುರುಕುಗೊಳಿಸಿದೆ.

ಬೆಂಗಳೂರು ನಗರದಾದ್ಯಂತ PAY CM ಶೀರ್ಷಿಕೆಯ ಪೋಸ್ಟರ್ಗಳನ್ನು ಅಂಟಿಸಲಾಗಿದ್ದು, ಇದರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರವೂ ಇದೆ.

ಈ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಕಾಂಗ್ರೆಸ್ ಪಕ್ಷ ಇತ್ತೀಚೆಗೆ ಬಿಡುಗಡೆ ಮಾಡಿರುವ ‘40% ಕಮಿಷನ್ ಸರ್ಕಾರ’ ವೆಬ್ ಸೈಟ್ ಗೆ ಕರೆದೊಯ್ಯುತ್ತದೆ.

ರಾಜ್ಯದಲ್ಲಿ ಕಳೆದ ಕೆಲವು ತಿಂಗಳಿಂದ ಸರ್ಕಾರದ ವಿರುದ್ಧ ಗುತ್ತಿಗೆದಾರರಿಂದ 40 ಶೇಕಡ ಕಮಿಷನ್ ಪಡೆಯುತ್ತಿರುವ ಆರೋಪ ಕೇಳಿ ಬರುತ್ತಿದ್ದು, ಈ ಹಿನ್ನೆಲೆಯಲ್ಲಿ ಪೋಸ್ಟರ್ಗಳನ್ನು ರೂಪಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...