ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಟೋಲ್ ದರ ಹೆಚ್ಚಳ ಖಂಡಿಸಿ ಕನ್ನಡಪರ ಸಂಘಟನೆಗಳು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಿಗ್ಗೆ 10:30ರಿಂದ ಸಂಜೆ 6 ಗಂಟೆಯವರೆಗೆ ಪ್ರತಿಭಟನೆ ನಡೆಸಲು ಸಂಘಟನೆಗಳು ಕರೆ ನೀಡಿದ್ದು, ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರಿನ ದಕ್ಷಿಣ ತಾಲೂಕಿನ ಕಣ್ಮಣ್ಕಿ ಟೋಲ್ ಬಳಿ ಪ್ರತಿಭಟನಾಕಾರರು ಧರಣಿ ನಡೆಸಿದ್ದು, ಒಂದು ಹಂತದಲ್ಲಿ ಪ್ರತಿಭಟನಾಕಾರರು ಟೋಲ್ ಗೆ ನುಗ್ಗಲು ಯತ್ನಿಸಿದ್ದಾರೆ.
ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಕನ್ನಡಪರ ಸಂಘಟನೆಯ ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.