ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ 2ನೇ ಹಂತದ ಟೋಲ್ ಸಂಗ್ರಹ ಇಂದಿನಿಂದ ಆರಂಭವಾಗಿದ್ದು, ಕನ್ನಡಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಟೋಲ್ ಬಳಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ತೀವ್ರಗೊಳಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯ ವೇಳೆ ಓರ್ವ ವ್ಯಕ್ತಿ ಪಟಾಪಟಿ ಚಡ್ಡಿಯಲ್ಲೇ ಬಂದು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ವಾಹನ ಸವಾರರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಕಿಡಿಕಾರಿದ್ದಾರೆ. ಕಾಮಗಾರಿಯೇ ಇನ್ನೂ ಪೂರ್ಣಗೊಂಡಿಲ್ಲ, ಆಗಲೇ ಎರಡನೇ ಟೋಲ್ ಸಂಗ್ರಹ ಆರಂಭಿಸುತ್ತಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ.