alex Certify BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಟೋಲ್ ಸಂಗ್ರಹಕ್ಕೆ ವಿರೋಧ; ಕಾಂಗ್ರೆಸ್, ಕನ್ನಡಪರ ಸಂಘಟನೆ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಟೋಲ್ ಸಂಗ್ರಹಕ್ಕೆ ವಿರೋಧ; ಕಾಂಗ್ರೆಸ್, ಕನ್ನಡಪರ ಸಂಘಟನೆ ಪ್ರತಿಭಟನೆ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೆನಲ್ಲಿ ಇಂದಿನಿಂದ ಟೋಲ್ ಸಂಗ್ರಹ ಮಾಡಲಾಗುತ್ತಿದ್ದು, ಟೋಲ್ ಸಂಗ್ರಹ ವಿರೋಧಿಸಿ ಕನ್ನಡಪರ ಸಂಘಟನೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರಿನಿಂದ ಮೈಸೂರಿನತ್ತ ಸಾಗುವ ವಾಹನಗಳಿಗೆ ಬೆಂಗಳೂರಿನ ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ ಹಾಗೂ ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರದ ಶೇಷಗಿರಿ ಫ್ಲಾಜಾದಲ್ಲಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ. ಇದನ್ನು ವಿರೋಧಿಸಿ ಪ್ರತಿಭಟನೆ ತೀವ್ರಗೊಂಡಿದೆ.

ಶೇಷಗಿರಿ ಟೋಲ್ ಬಳಿ ಜಮಾವಣೆಗೊಂಡಿರುವ ಕಾಂಗ್ರೆಸ್ ಹಾಗೂ ಕನ್ನಡ ಪರ ಸಂಘಟನೆ ಕಾರ್ಯಕರ್ತರು ರಸ್ತೆಯಲ್ಲಿ ಹಾಲಿನ ಕ್ಯಾನ್ ಗಳನ್ನಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೋಲ್ ಸಂಗ್ರಹದಿಂದಾಗಿ ರೈತರು, ಜನಸಾಮಾನ್ಯರಿಗೆ ಸಮಸ್ಯೆಯಾಗುತ್ತಿದೆ. ತಕ್ಷಣ ಟೋಲ್ ಸಂಗ್ರಹ ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...