ರಾಮನಗರ: ಬೆಂಗಳೂರು-ಮೈಸೂರು ದಶಪಥ ರಸ್ತೆ ಉದ್ಘಾಟನೆಗೆ ಸಿದ್ಧತೆ ನಡೆದಿರುವಾಗಲೇ ಕನ್ನಡ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.
ಮೊದಲು ಸರ್ವಿಸ್ ರಸ್ತೆ, ಮೂಲ ಸೌಕರ್ಯ ಕಲ್ಪಿಸಿ ನಂತರ ಹೆದ್ದಾರಿ ಉದ್ಘಾಟನೆ ಮಾಡಿ ಎಂದು ಕನ್ನಡ ಪರ ಸಂಘಟನೆಗಳು ಒತ್ತಾಯಿಸಿವೆ. ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಟೋಲ್ ಬಳಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆ ಮಾಡಲಿದ್ದು, ಅಂದು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲು ಕನ್ನಡಪರ ಸಂಘಟನೆಗಳು ನಿರ್ಧರಿಸಿವೆ.
ಅಲ್ಲದೇ ಮಾರ್ಚ್ 14ರಿಂದ ಹೆದ್ದಾರಿ ಪ್ರಾಧಿಕಾರ ಟೋಲ್ ಸಂಗ್ರಹಕ್ಕೆ ತೀರ್ಮಾನಿಸಿದೆ. ಒಂದು ವೇಳೆ ಟೋಲ್ ಸಂಗ್ರಹ ಮಾಡಲು ಯತ್ನಿಸಿದ್ದೇ ಆದಲ್ಲಿ ಟೋಲ್ ಗಳನ್ನು ಧ್ವಂಸ ಮಾಡುವುದಾಗಿ ಎಚ್ಚರಿಕೆ ನೀಡಿದೆ.