ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುವ ಆತಂಕ ಎದುರಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ ಆರಂಭವಾಗಿದೆ.
ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳ ಸಲಹೆ ಬೆನ್ನಲ್ಲೇ ಬೆಂಗಳೂರು ವಿಶ್ವ ವಿದ್ಯಾಲಯ ಮಾಸ್ಕ್ ಕಡ್ಡಾಯ ಮಾಡಿ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳು, ಉಪನ್ಯಾಸಕರು, ಅಧಿಕಾರಿಗಳು, ಸಿಬ್ಬಂದಿಗಳಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ.
ಮಾಸ್ಕ್ ಜೊತೆಗೆ ಬೂಸ್ಟರ್ ಡೋಸ್ ಪಡೆಯುವಂತೆಯೂ ವಿಶ್ವ ವಿದ್ಯಾಲಯ ಆದೇಶ ಹೊರಡಿಸಿದೆ.