ಬೆಂಗಳೂರು: ರಾಜಧಾನಿ ಬೆಂಗಳೂರು ಹೊರತುಪಡಿಸಿ ಹಲವು ಜಿಲ್ಲೆಗಳಲ್ಲಿ ಸಂಘರ್ಷಕ್ಕೆ ಕಾರಣವಾಗಿದ್ದ ಹಿಜಾಬ್ ವಿವಾದ ಇದೀಗ ಬೆಂಗಳೂರು ಶಾಲೆಗಳಿಗೂ ಕಾಲಿಟ್ಟಿದೆ.
ಬೆಂಗಳೂರಿನ ಚಂದ್ರಾಲೇಔಟ್ ನಲ್ಲಿರುವ ವಿದ್ಯಾಸಾಗರ್ ಪಬ್ಲಿಕ್ ಸ್ಕೂಲ್ ನಲ್ಲಿ ಶಿಕ್ಷಕಿಯೊಬ್ಬರು ಹಿಜಾಬ್ ಕುರಿತು ಅವಹೇಳನಕಾರಿಯಾಗಿ ಬೋರ್ಡ್ ಮೇಲೆ ಬರೆದಿದ್ದಾರೆ ಎಂದು ಆರೋಪಿಸಿ ಮುಸ್ಲಿಂ ವಿದ್ಯಾರ್ಥಿಗಳ ಪೋಷಕರು ಶಾಲೆಗೆ ದೌಡಾಯಿಸಿ ಗಲಾಟೆ ನಡೆಸಿದ್ದಾರೆ.
ಮತಗಟ್ಟೆ ಮುಂದೆ ನಿಂತರೂ ದಾಖಲೆಗಳಲ್ಲಿ ಮೃತಪಟ್ಟಿದ್ದಾರೆಂದು ವೃದ್ದನಿಗೆ ಮತದಾನ ಹಕ್ಕು ನಿರಾಕರಣೆ
ಹಿಜಾಬ್ ವಿವಾದ ಹೈಕೋರ್ಟ್ ನಲ್ಲಿದ್ದು, ತೀರ್ಪು ಬರುವವರೆಗೂ ಸಮವಸ್ತ್ರ ಕಡ್ಡಾಯ ಎಂದು ನ್ಯಾಯಾಲಯ ಆದೇಶ ನೀಡಿದ್ದರೂ ಮೂವರು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಹಿಜಾಬ್ ಧರಿಸಿ ತರಗತಿಗೆ ಬರದಂತೆ ಸೂಚಿಸಿದ್ದೇವೆ ಹೊರತು ಅವಹೇಳನಕಾರಿಯಾಗಿ ಬೋರ್ಡ್ ನಲ್ಲಿ ಬರೆದಿಲ್ಲ ಎಂದು ಶಿಕ್ಷಕರು ಹೇಳಿದ್ದಾರೆ. ಆದರೆ ಹಿಜಾಬ್ ನಮ್ಮ ಹಕ್ಕು ಪ್ರಶ್ನೆ ಮಾಡುವಂತಿಲ್ಲ ಎಂದು ಮುಸ್ಲಿಂ ವಿದ್ಯಾರ್ಥಿಗಳ ಪೋಷಕರು ಶಾಲೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಶಾಲೆ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಹಾಗೂ ಡಿಡಿಪಿಐ ರಾಜೇಂದ್ರ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿಗಳ ಪೋಷಕರನ್ನು ಸಮಾಧಾನಪಡಿಸಿ, ವಾಪಸ್ ಕಳುಹಿಸಲು ಹರಸಾಹಸ ಪಟ್ಟಿದ್ದಾರೆ.