alex Certify BIG NEWS: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 4 ದಿನ ಭಾರಿ ಮಳೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 4 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಚಂಡಮಾರುತದ ಪರಿಣಾಮವಾಗಿ ಈಗಾಗಲೇ ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 4ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ. ಇನ್ನು ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...