ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆಗಳಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಶಿಷ್ಟ ಮೊಳಕೆ ಕಾಳು ಚಾಟ್ ಮಾರಾಟ ಮಾಡುವ ಹಿರಿಯ ವ್ಯಕ್ತಿ: ವಿಡಿಯೋ ವೈರಲ್
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಉಳಿದಂತೆ ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಈ ನಡುವೆ ತಮಿಳುನಾಡಿನಲ್ಲಿ ಮುಂದಿನ ಎರಡು ವಾರಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ. ಆಂಧ್ರ, ಕೇರಳ, ಪುದುಚೆರಿಗಳಲ್ಲು ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.