ತೆಂಗು ಬೆಳೆಗಾರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ವಾರದೊಳಗಾಗಿ ಬೆಂಬಲ ಬೆಲೆ ಅಡಿ ಕೊಬ್ಬರಿಯನ್ನು ಖರೀದಿಸಲು ಸಿದ್ಧತೆ ನಡೆಸಿದೆ.
ಭಾನುವಾರದಂದು ತಿಪಟೂರಿನಲ್ಲಿ ನಡೆದ ಸಿದ್ದರಾಮೇಶ್ವರ ಜಯಂತಿ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ವಿಷಯ ತಿಳಿಸಿದ್ದಾರೆ.
ನಾಫೆಡ್ ಮುಖಾಂತರ ವಾರದೊಳಗೆ ಬೆಂಬಲ ಬೆಲೆ ಅಡಿ ಕೊಬ್ಬರಿಯನ್ನು ಖರೀದಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದು, ರಾಗಿ ಖರೀದಿಗೂ ರೈತರು ಈಗಾಗಲೇ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.