ಬೆಳಗಾವಿ: ಬೆಳಗಾವಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ಬಿಜೆಪಿ ಶಾಸಕ ಅಭಯ್ ಪಾಟೀಲ್, ಘಟನೆಗೆ ಪೊಲೀಸ್ ವೈಫಲ್ಯವೇ ಕಾರಣ ಎಂದು ಆರೋಪಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಬೆಳಗಾವಿ ಇಂಟಲಿಜನ್ಸ್ ಸಂಪೂರ್ಣ ವಿಫಲವಾಗಿದೆ. ಈ ಸಂಬಂಧ ಗೃಹ ಸಚಿವರ ಜತೆ ಮಾತನಾಡಿದ್ದೇನೆ ಎಂದು ಹೇಳಿದರು.
ʼವಿಂಟರ್ ಟೂರ್ʼ ಪ್ರಿಯರಿಗೆ ಇಲ್ಲಿದೆ ನೋಡಿ ಟಿಪ್ಸ್
ಘಟನೆ ಹಿಂದೆ ರಾಜಕೀಯ ಷಡ್ಯಂತ್ರವಿದೆ. ಈ ಬಗ್ಗೆ ಅರಿತುಕೊಳ್ಳಬೇಕು. ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಕಾನೂನು ಬಾಹಿರವಾಗಿ ಯಾರೂ ಕೂಡ ನಡೆದುಕೊಳ್ಳಬಾರದು ಎಂದು ತಿಳಿಸಿದರು.