alex Certify BIG NEWS: ಬೆಳಗಾವಿ ಪರಿಷತ್ ಕಾಂಗ್ರೆಸ್ ಪಾಲು; ಬಿಜೆಪಿಗೆ ಮುಳುವಾದ ಜಾರಕಿಹೊಳಿ ಆಟ; ಕಮಲ ಪಡೆಗೆ ಭಾರಿ ಮುಖಭಂಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಳಗಾವಿ ಪರಿಷತ್ ಕಾಂಗ್ರೆಸ್ ಪಾಲು; ಬಿಜೆಪಿಗೆ ಮುಳುವಾದ ಜಾರಕಿಹೊಳಿ ಆಟ; ಕಮಲ ಪಡೆಗೆ ಭಾರಿ ಮುಖಭಂಗ

ಬೆಳಗಾವಿ: ತೀವ್ರ ಜಿದ್ದಾಜಿದ್ದಿನ ಅಖಾಡ ಬೆಳಗಾವಿ ಪರಿಷತ್ ಕ್ಷೇತ್ರ ಇದೀಗ ಕಾಂಗ್ರೆಸ್ ಪಾಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ದ್ವಿಸದಸ್ಯ ಕ್ಷೇತ್ರವನ್ನು ಹೊಂದಿರುವ ಬೆಳಗಾವಿಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ, ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೋಳಿ ಜಯಭೇರಿ ಬಾರಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ 2ನೇ ಸ್ಥಾನದಲ್ಲಿದ್ದರೆ, ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಸೋಲನುಭವಿಸಿದ್ದಾರೆ. ಇದು ಬಿಜೆಪಿಗೆ ತೀವ್ರ ಮುಖಭಂಗಕ್ಕೆ ಕಾರಣವಾಗಿದೆ.

ತಮ್ಮದೇ ಪಕ್ಷದ ಶಾಸಕ ರಮೇಶ್ ಜಾರಕಿಹೊಳಿ, ತಮ್ಮ ಸಹೋದರ ಲಖನ್ ಜಾರಕಿಹೊಳಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದು, ಬಿಜೆಪಿ ಸೋಲಿಗೆ ಕಾರಣ ಎನ್ನಲಾಗಿದೆ.

ಒಟ್ಟಾರೆ ದ್ವಿಸದಸ್ಯ ಕ್ಷೇತ್ರ ಗೆಲ್ಲಲು ಜಾರಕಿಹೊಳಿ ಆಡಿದ ಆಟ ಬಿಜೆಪಿ ಹಿನ್ನಡೆಗೆ ಕಾರಣವಾಗಿದೆ. ಒಂದು ಕ್ಷೇತ್ರ ಕಾಂಗ್ರೆಸ್ ಪಾಲಾಗಿದ್ದರೆ, ಇನ್ನೊಂದು ಕ್ಷೇತ್ರ ಪಕ್ಷೇತರ ಅಭ್ಯರ್ಥಿ ಲಖನ್ ಪಾಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...