ಬೆಳಗಾವಿ: ಕುಂದಾನಗರಿ ಬೆಳಗಾವಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 27 ಆರೋಪಿಗಳನ್ನು ಬಧಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬೆಳಗಾವಿ ಆನಗೋಳದಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸಗೊಳಿಸಿದ್ದ ಪುಂಡರು ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಅಟ್ಟಹಾಸ ಮೆರೆದಿದ್ದರು. ಕಿಡಿಗೇಡಿಗಳ ಕೃತ್ಯಕ್ಕೆ ಕನ್ನಡಪರ ಸಂಘಟನೆ ಕಾರ್ಯಕರ್ತರು ಬೀದಿಗಿಳಿದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ನಗರದಲ್ಲಿ ಮುಂಜಾಗೃತಾ ಕ್ರಮವಾಗಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ಎಲ್ಲೇ ಹೋದರೂ ಕಮೆಡಿಯನ್ ಜೊತೆಗೆ ಇರಲೇಬೇಕು ಈ ತಟ್ಟೆ….!
ಈ ನಡುವೆ ಹಿಂಸಾಚಾರ ಪ್ರಕರಣ ಸಂಬಂಧ ಹಿಂದೂಸ್ಥಾನ್ ಶ್ರೀರಾಮಸೇನೆ ಸಂಸ್ಥಾಪಕ ರಮಾಕಾಂತ್ ಕೊಂಡುಸ್ಕರ್ ಸೇರಿದಂತೆ 27 ಆರೋಪಿಗಳನ್ನು ಬಂಧಿಸಿರುವ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಧೀಶರು ಎಲ್ಲಾ 27 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ.