ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು, ಬೆಳೆಹಾನಿ ಕುರಿತು ಸಮೀಕ್ಷೆಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನಿರಂತರ ಮಳೆ ಸಮೀಕ್ಷೆಗೆ ಅಡ್ಡಿಯಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಎಡೆಬಿಡದೇ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಹಲವು ಅನಾಹುತಗಳು ಸೃಷ್ಟಿಯಾಗಿವೆ. ರೈತರ ಬೆಳೆ ನೀರುಪಾಲಾಗಿದ್ದು, ಹಲವರು ಮನೆ-ಮಠ ಕಳೆದುಕೊಂಡಿದ್ದಾರೆ. ಪರಿಹಾರ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಆದರೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಆಯೋಗದ ಅನುಮತಿ ಪಡೆದುಕೊಳ್ಳಬೇಕಾದ ಅಗತ್ಯವಿದೆ ಎಂದು ಹೇಳಿದರು.
ರೈತರ ಖಾತೆಗೆ ಡಿಬಿಟಿ ಮೂಲಕ ಬೆಳೆ ಹಾನಿ ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ
ಭಾರಿ ಮಳೆಯಿಂದಾಗಿ ಜುಲೈ, ಆಗಸ್ಟ್ ನಲ್ಲಿ 3 ಲಕ್ಷ ರೈತರ ಬೆಳೆ ಹಾನಿಯಾಗಿತ್ತು. ಹೀಗಾಗಿ 130 ಕೋಟಿ ಪರಿಹಾರ ಬಿಡುಗಡೆಗೆ ಈಗಗಾಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಸಧ್ಯದ ಮಳೆ ಹಾನಿ ಕುರುತಾಗಿ ಶೀಘ್ರದಲ್ಲಿ ಸಮೀಕ್ಷೆ ನಡೆಸಿ ಪರಿಹಾರ ಕಾರ್ಯದ ಬಗ್ಗೆ ಚರ್ಚಿಸಲಾಗುವುದು ಎಂದರು.