ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಸ್ಕಾಂ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಬೆಸ್ಕಾಂ ಕಚೇರಿಯ ಸಹಾಯಕ ಕಾರ್ಯಪಡೆ ಇಂಜಿನಿಯರ್ ಬಿ.ಎಂ.ಕರಿಬಸವಯ್ಯ ಲೋಕಾಯುಕ್ತ ಬಲೆಗೆ ಬಿದ್ದವರು. ಕಡತ ವಿಲೇವಾರಿಗಾಗಿ ಕೆಇಬಿ ಗುತ್ತಿಗೆದಾರ ಬೇವಿನಹಳ್ಳಿ ಮಹೇಶ್ವರಪ್ಪ ಅವರ ಬಳಿ ಕರಿಬಸವಯ್ಯ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಮೊದಲೆ 9 ಸಾವಿರ ರೂಪಾಯಿ ಪಡೆದುಕೊಂಡಿದ್ದ ಕರಿಬಸವಯ್ಯ, ಇಂದು ಬೆಸ್ಕಾಂ ಕಚೇರಿಯಲ್ಲಿ ಬಾಕಿ 6 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಬೆಸ್ಕಾಂ ದಾವಣಗೆರೆ ಲೋಕಾಯುಕ್ತ ಎಸ್ ಪಿ ಕೌಲಾಪುರೆ ದಾಳಿ ನಡೆಸಿದ್ದಾರೆ. ಕರಿಬಸವಯ್ಯ ಅವರನ್ನು ವಶಕ್ಕೆ ಪಡೆದಿದ್ದಾರೆ.