ಪಿಂಚಣಿ ಹಾಗು ವಾರದಲ್ಲಿ ಐದು ದಿನಗಳ ಕೆಲಸದ ಬೇಡಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿರುವ ಬ್ಯಾಂಕ್ ನೌಕರರು, ಇವುಗಳನ್ನು ಈಡೇರಿಸದಿದ್ದಲ್ಲಿ ಮುಷ್ಕರಕ್ಕೆ ಮುಂದಾಗುವುದಾಗಿ ತಿಳಿಸಿದ್ದಾರೆ.
ಬ್ಯಾಂಕ್ ಸಿಬ್ಬಂದಿಗಳ ಉನ್ನತ ಸಂಸ್ಥೆಯಾದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಜೂನ್ 27ರಂದು ಮುಷ್ಕರ ಮಾಡುವುದಾಗಿ ಘೋಷಿಸಿದ್ದು, ಇದರಲ್ಲಿ ಸಾರ್ವಜನಿಕ ವಲಯದ ಬ್ಯಾಂಕ್ ಗಳಲ್ಲಿ ಕಾರ್ಯನಿರ್ವಹಿಸುವ ಸುಮಾರು 7 ಲಕ್ಷ ಬ್ಯಾಂಕ್ ಸಿಬ್ಬಂದಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದೆ.
ಸರ್ಕಾರ ಹಾಗೂ ಬ್ಯಾಂಕುಗಳ ಆಡಳಿತ ಮಂಡಳಿಯು ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಮುಷ್ಕರ ಅನಿವಾರ್ಯ ಎಂದು ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ತಿಳಿಸಿದ್ದು, ಸರ್ಕಾರ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಬೇಕೆಂದು ತಿಳಿಸಿದೆ.