alex Certify BIG NEWS: ಬೇರೆ ಪಕ್ಷ ಸೇರ್ಪಡೆ ವದಂತಿಗೆ ತೆರೆ ಎಳೆದ ಬಾಲಚಂದ್ರ ಜಾರಕಿಹೊಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೇರೆ ಪಕ್ಷ ಸೇರ್ಪಡೆ ವದಂತಿಗೆ ತೆರೆ ಎಳೆದ ಬಾಲಚಂದ್ರ ಜಾರಕಿಹೊಳಿ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜೆಡಿಎಸ್ ಪಕ್ಷದಿಂದ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿಗೆ ಅವರ ಸಹೋದರ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತೆರೆ ಎಳೆದಿದ್ದಾರೆ.

ಮೂಡಲಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಗೋಕಾಕ್ ಕ್ಷೇತ್ರದಿಂದ ಹಾಗೂ ತಾವು ಅರಭಾವಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಗಳಾಗಿಯೇ ಕಣಕ್ಕಿಳಿಯುತ್ತೇವೆ. ಯಾವುದೇ ಕಾರಣಕ್ಕೂ ಬೇರೆ ಪಕ್ಷ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಇತ್ತೀಚೆಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಹೆಚ್.ಡಿ. ಕುಮಾರಸ್ವಾಮಿಯವರು ತಮ್ಮನ್ನು ಸಂಪರ್ಕದಲ್ಲಿರುವುದು ನಿಜ ಎಂದು ಹೇಳಿದ್ದ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ, ಜೆಡಿಎಸ್ ಸೇರಬಹುದು ಎಂಬ ಊಹಾಪೋಹ ಹರಡಿತ್ತು. ಇದೀಗ ಬಾಲಚಂದ್ರ ಜಾರಕಿಹೊಳಿ ಇದಕ್ಕೆ ತೆರೆ ಎಳೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...