ಬೆಂಗಳೂರು: ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ವಿರುದ್ಧ ನಿಗಮದ ಎಂ.ಡಿ. ರೂಪಾ ಮೌದ್ಗಿಲ್ ದೂರು ನೀಡಿದ್ದಾರೆ.
ಎಂ.ಜಿ. ರಸ್ತೆಯಲ್ಲಿರುವ ಪ್ರಧಾನ ಕಚೇರಿಯಲ್ಲಿರುವ ಸಿಸಿ ಟಿವಿ ಡಿವಿಆರ್ ನ್ನು ವಿರೂಪಗೊಳಿಸಿದ್ದಾರೆ ಎಂದು ಆರೋಪಿಸಿ ಬೇಳೂರು ರಾಘವೇಂದ್ರ ಶೆಟ್ಟಿ ವಿರುದ್ಧ ದೂರು ಸಲ್ಲಿಕೆಯಾಗಿದೆ.
ಮೇ 27ರಂದು ಬೆಳಿಗ್ಗೆ ಕಚೇರಿ ಅಟೆಂಡರ್ ನ್ನು ಕರೆಸಿಕೊಂಡು ಅಪರಿಚಿತ ವ್ಯಕ್ತಿ ಮೂಲಕ ಡಿವಿಆರ್ ವಿರೂಪಗೊಳಿಸಿದ್ದಾರೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಲಿಖಿತ ರೂಪದಲ್ಲಿ ಡಿ. ರೂಪಾ ದೂರು ನೀಡಿದ್ದಾರೆ.