ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಪ್ರಸಕ್ತ ಶೈಕ್ಷಣಿಕ ವರ್ಷದ ಬೇಸಿಗೆ ರಜೆಯಲ್ಲಿ ಮಹತ್ತರ ಬದಲಾವಣೆ ಮಾಡಿರುವ ಶಿಕ್ಷಣ ಇಲಾಖೆ ಏಪ್ರಿಲ್ 10ರಿಂದ ರಜೆ ನೀಡಲು ನಿರ್ಧರಿಸಿದೆ.
ಈ ಕುರಿತು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಪ್ರಸಕ್ತ ಸಾಲಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಏಪ್ರಿಲ್ 10 ರಿಂದ ಮೇ 15ರವರೆಗೆ ಬೇಸಿಗೆ ರಜೆ ನೀಡುವುದಾಗಿ ತಿಳಿಸಿದೆ.
BIG NEWS: ಉಕ್ರೇನ್ ಮೇಲೆ ರಷ್ಯಾ ಯುದ್ಧ ನನ್ನ ಅಧಿಕಾರಾವಧಿಯ ದುಃಖದ ಕ್ಷಣವೆಂದ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ
2022-23ರ ಶೈಕ್ಷಣಿಕ ವರ್ಷದ ಆರಂಭದಲ್ಲಿಯೂ ಬದಲಾವಣೆಯಾಗಿದ್ದು ಈ ಹಿಂದೆ ಇದ್ದ ಮೇ 29ರಿಂದ ಆರಂಭವಾಗುತ್ತಿದ್ದ ಶೈಕ್ಷಣಿಕ ವರ್ಷ ಈ ಬಾರಿ ಮೇ 16ರಿಂದ ಆರಂಭವಾಗಲಿದೆ.
ಕೋವಿಡ್ ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದ ಭೌತಿಕ ತರಗತಿಗಳು ಸಮರ್ಪಕವಾಗಿ ನಡೆಯದೇ ಇದ್ದುದರಿಂದ ಮಕ್ಕಳ ವಿದ್ಯಾಭ್ಯಾಸದ ಮೇಲೆ ಹೊಡೆತ ಬಿದ್ದಿರುವ ಹಿನ್ನೆಲೆಯಲ್ಲಿ ಈಬಾರಿ ಶೈಕ್ಷಣಿಕ ವರ್ಷ ಬೇಗನೇ ಆರಂಭವಾಗಲಿದೆ. ಕಲಿಕಾ ಹಿನ್ನಡೆ ಸರಿದೂಗಿಸಲು ಕಲಿಕಾ ಚೇತರಿಕಾ ಕಾರ್ಯಕ್ರಮವನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಆರಂಭಿಸುವುದಾಗಿ ಇಲಾಖೆ ತಿಳಿಸಿದೆ.