
ಬೈಕಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿ, ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಗುಡದೂರು ಗ್ರಾಮದ ಬಳಿ ನಡೆದಿದೆ.
ಸೋಮವಾರ ತಡರಾತ್ರಿ ಈ ಘಟನೆ ನಡೆದಿದ್ದು, ಆಂಧ್ರಪ್ರದೇಶದ ನಂದ್ಯಾಲದ ನಾಗರಾಜ, ಜಯಪಾಲ ಹಾಗೂ ಸೀನ ಎಂಬ ಮೂವರು ಯುವಕರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಶ್ರೀಕಾಂತ್ ಎಂಬಾತನನ್ನು ಲಿಂಗಸಗೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತವೆಸಗಿದ ಬಳಿಕ ಚಾಲಕ ಬಸ್ ನಿಲ್ಲಿಸದೆ ತೆರಳಿದ್ದು, ಬಳಿಕ ಇದನ್ನು ಹಿಂಬಾಲಿಸಿಕೊಂಡು ಹೋದ ಸಬ್ ಇನ್ಸ್ಪೆಕ್ಟರ್ ಸಿದ್ದರಾಮ ಬಿದರಾಣಿ ಬಸ್ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಸ್ ಯಾದಗಿರಿ ಡಿಪೋಗೆ ಸೇರಿದ್ದು ಎಂಬುದು ತಿಳಿದು ಬಂದಿದೆ.