alex Certify BIG NEWS: ಬೈಕ್ ನಿಲ್ಲಿಸಿ ಜ್ಯೂಸ್ ಕುಡಿಯುತ್ತಿದ್ದವನ ಮೇಲೆ ಜವರಾಯನಂತೆ ಬಂದೆರಗಿದ ಕಾರು; ಸವಾರ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೈಕ್ ನಿಲ್ಲಿಸಿ ಜ್ಯೂಸ್ ಕುಡಿಯುತ್ತಿದ್ದವನ ಮೇಲೆ ಜವರಾಯನಂತೆ ಬಂದೆರಗಿದ ಕಾರು; ಸವಾರ ಸ್ಥಳದಲ್ಲೇ ಸಾವು

ಮೈಸೂರು: ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು-ಟಿ.ನರಸಿಪುರ ರಸ್ತೆಯಲ್ಲಿ ಸಂಭವಿಸಿದೆ.

ಬೈಕ್ ಸವಾರ ರವಿಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರವಿಕುಮಾರ್ ರಸ್ತೆ ಪಕ್ಕದಲ್ಲಿ ಬೈಕ್ ನಿಲ್ಲಿಸಿ ಬೈಕ್ ನಲ್ಲೇ ಕುಳಿತು ಜ್ಯೂಸ್ ಕುಡಿಯುತ್ತಿದ್ದ. ಈ ವೇಳೆ ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ರವಿ ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತವಾಗುತ್ತಿದ್ದಂತೆ ಕಾರು ಚಾಲಕ ಕಾರಿನೊಂದಿಗೆ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ತಕ್ಷಣ ಎಚ್ಚೆತ್ತ ಸ್ಥಳೀಯರು ಕಾರನ್ನು ತಡೆದು ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...