ಮಂಡ್ಯ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.
26 ವರ್ಷದ ರಿತೇಶ್ ಕುಮಾರ್ ಮೃತ ವ್ಯಕ್ತಿ. ಕೆಲಸಕ್ಕೆಂದು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ್ದಾರೆ.
ಮೃತ ರಿತೇಶ್ ಕುಮಾರ್ ಬಾಬುರಾಯನಕೊಪ್ಪಲು ನಿವಾಸಿ. ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.