ಮಂಗಳೂರು: ಇತಿಹಾಸ ಪ್ರಸಿದ್ಧ ಮಂಗಳೂರು ಕದ್ರಿ ದೇವಾಲಯಕ್ಕೆ ಬೈಕ್ ನಲ್ಲಿ ಬಂದ ಅಪರಿಚಿತ ಯುವಕರ ಗುಂಪು ಏಕಾಏಕಿ ನುಗ್ಗಿದ ಘಟನೆ ನಡೆದಿದೆ.
ಮೂವರು ಯುವಕರು ಬೈಕ್ ನೊಂದಿಗೆ ದೇವಾಲಯದ ಆವರಣಕ್ಕೆ ನುಗ್ಗಿದ್ದಾರೆ. ಅನುಮಾನಾಸ್ಪದವಾಗಿ ದೇಗುಲ ಪ್ರವೇಶ ಮಾಡಿರುವುದಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಅಲ್ಲದೇ ಮೂವರು ಯುವಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಸೈಗೋಳಿ ನಿವಾಸಿಗಳಾದ ಹಸನ್ ಶಾಹಿನ್, ಜಾಫರ್, ಪಾರೂಕ್ ವಶಕ್ಕೆ ಪಡೆದ ಯುವಕರು.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ