ಬೆಂಗಳೂರು: ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವ ಸಂಪುಟದಲ್ಲಿ ಹಲವು ವಲಸಿಗರಿಗೆ ಮಂತ್ರಿ ಸ್ಥಾನ ಕೈತಪ್ಪುವ ಭೀತಿ ಎದುರಾಗಿತ್ತು. ಆದರೀಗ ಬಹುತೇಕರಿಗೆ ಸಚಿವ ಸ್ಥಾನ ನೀಡುವುದು ಖಚಿತವಾಗಿದೆ.
ಬಿ.ಎಸ್.ಯಡಿಯೂರಪ್ಪ ಸರ್ಕಾರದ ಅವಧಿಯಿಂದಲೂ ಮಂತ್ರಿ ಸ್ಥಾನಕ್ಕಾಗಿ ಯತ್ನಿಸಿದ್ದ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನಗೆ ಈ ಬಾರಿ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ.
ಕೊರೊನಾದಲ್ಲಿ ತಂದೆ-ತಾಯಿ ಕಳೆದುಕೊಂಡ ವಿದ್ಯಾರ್ಥಿನಿ ಮಾಡಿದ್ದಾಳೆ ಈ ಸಾಧನೆ
ವಲಸಿಗ ಶಾಸಕರಾದ ಬಿ.ಸಿ.ಪಾಟೀಲ್, ಎಂಟಿಬಿ ನಾಗರಾಜ್, ಶಿವರಾಮ್ ಹೆಬ್ಬಾರ್, ಕೆ. ಗೋಪಾಲಯ್ಯ, ಕೆ.ಸಿ.ನಾರಾಯಣಗೌಡ, ಡಾ.ಕೆ.ಸುಧಾಕರ್, ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜ್, ಮುನಿರತ್ನ ನೂತನ ಸಂಪುಟ ಸೇರ್ಪಡೆಯಾಗಲಿದ್ದಾರೆ.
ಮಧ್ಯಾಹ್ನ 2:15ಕ್ಕೆ ರಾಜಭವನದಲ್ಲಿ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು, ಒಟ್ಟು 28 ಶಾಸಕರಿಗೆ ಸ್ವತಃ ಸಿಎಂ ಬೊಮ್ಮಾಯಿ ಕರೆ ಮಾಡಿ ಪ್ರಮಾಣವಚನ ಸ್ವೀಕಾರಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ ಎಂದು ತಿಳಿದು ಬಂದಿದೆ.