ಬೆಂಗಳೂರು: ಬಿಜೆಪಿ ಶಾಸಕ ತಿಪ್ಪಾರೆಡ್ಡಿ ವಿರುದ್ಧ ಕಮಿಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸುವುದಾಗಿ ಶಾಸಕರು ಹೇಳಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಶಾಸಕರ ವಿರುದ್ಧ ಕಮಿಷನ್ ಪಡೆದ ಆರೋಪ ಮಾಡಿದ್ದ ಕೆಂಪಣ್ಣ ವಿರುದ್ಧ ಈಗಾಗಲೇ ಕೇಸ್ ದಾಖಲಾಗಿದೆ. ಗುತ್ತಿಗೆದಾರರ ಮೇಲೆ ದೂರು ನೀಡುವುದಾಗಿ ತಿಪ್ಪಾರೆಡ್ಡಿ ಹೇಳಿದ್ದಾರೆ ಎಂದರು.
ಚುನಾವಣೆ ಸಮೀಪಿಸುತ್ತಿರುವುದರಿಂದ ಸುಮ್ಮನೇ ಆರೋಪ ಮಾಡಬಹುದು. ಯಾರೇ ಬ್ಲ್ಯಾಕ್ ಮೇಲ್ ಮಾಡಿದರೂ ಮುಂದೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.