ಬೆಂಗಳೂರು: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಶಿವಮೊಗ್ಗದಲ್ಲಿ ನಮ್ಮ ಸಂಘಟನೆ ಕಾರ್ಯಕರ್ತನ ಹತ್ಯೆಯಾಗಿದೆ. ಹಿಂದೂ ಹರ್ಷ ಎಂದೇ ಯುವಕ ಜನಪ್ರಿಯನಾಗಿದ್ದ. ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಈಗಾಗಲೇ ಗೃಹ ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
Big News: ನೋಟರಿಗಳ ಕಾರ್ಯ ವಿಧಾನದ ಕುರಿತು ಬಾಂಬೆ ಹೈಕೋರ್ಟ್ ಮಹತ್ವದ ಹೇಳಿಕೆ
ಶಿವಮೊಗ್ಗ ಜನತೆ ಶಾಂತಿ ಕಾಪಾಡಬೇಕು. ಯಾರೂ ಕೂಡ ಉದ್ವೇಗಕ್ಕೆ ಒಳಗಾಗಬಾರದು. ಅಹಿತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮಕ್ಕೆ ಈಗಾಗಲೇ ಸೂಚಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.