alex Certify Big News: ಭಾರತದ ‘ಆಧಾರ್’ ಕಾರ್ಡ್ ಹೊಂದಿದ್ದ ಬಾಂಗ್ಲಾ ಯುವಕ ಅಂದರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big News: ಭಾರತದ ‘ಆಧಾರ್’ ಕಾರ್ಡ್ ಹೊಂದಿದ್ದ ಬಾಂಗ್ಲಾ ಯುವಕ ಅಂದರ್

ಅಕ್ರಮವಾಗಿ ಭಾರತಕ್ಕೆ ನುಸುಳಿದ್ದ ಬಾಂಗ್ಲಾ ಯುವಕನೊಬ್ಬ ನಕಲಿ ದಾಖಲೆ ಪತ್ರಗಳನ್ನು ನೀಡಿ ಭಾರತದ ಆಧಾರ್ ಕಾರ್ಡ್, ಪಾನ್ ಕಾರ್ಡ್ ಮಾತ್ರವಲ್ಲದೆ ಮತದಾರರ ಗುರುತಿನ ಚೀಟಿಯನ್ನೂ ಪಡೆದುಕೊಂಡಿದ್ದು, ಇವುಗಳ ಆಧಾರದ ಮೇಲೆ ಪಾಸ್ಪೋರ್ಟ್ ಕೂಡ ಮಾಡಿಸಿಕೊಂಡಿದ್ದ ಪ್ರಕರಣ ಬೆಳಕಿಗೆ ಬಂದಿದೆ.

2020ರಲ್ಲಿ ಭಾರತಕ್ಕೆ ನುಸುಳಿದ್ದ ಅಯಾನ್ ಎಂಬಾತ ಆರಂಭದಲ್ಲಿ ಅಗರ್ತಲಾದಲ್ಲಿ ನೆಲೆಸಿದ್ದು, ಅಲ್ಲಿಯೇ ಈತ ಆಧಾರ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ ಪಡೆದುಕೊಂಡಿದ್ದ ಎನ್ನಲಾಗಿದೆ. ಇದರ ಆಧಾರದ ಮೇಲೆ ಪಾಸ್ಪೋರ್ಟ್ ಪಡೆದುಕೊಂಡಿದ್ದು, ಏಪ್ರಿಲ್ 16ರಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ದುಬೈಗೆ ತೆರಳಲು ಮುಂದಾದ ವೇಳೆ ಸಿಕ್ಕಿಬಿದ್ದಿದ್ದಾನೆ.

ಅನುಮಾನಸ್ಪದ ನಡುವಳಿಕೆ ತೋರಿದ ಹಿನ್ನೆಲೆಯಲ್ಲಿ ಅನುಮಾನಗೊಂಡ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಈ ವಿಚಾರ ಬೆಳಕಿಗೆ ಬಂದಿದೆ. ಇದೀಗ ಇಮಿಗ್ರೇಷನ್ ಅಧಿಕಾರಿಗಳು ಏರ್ಪೋರ್ಟ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಮುಂದಿನ ವಿಚಾರಣೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...