ಬೋರಿಸ್ ಜಾನ್ಸನ್ ರಾಜೀನಾಮೆಯಿಂದ ತೆರವಾಗಿದ್ದ ಬ್ರಿಟನ್ ಪ್ರಧಾನಿ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎಂಬ ಕುತೂಹಲಕ್ಕೆ ಇಂದು ತೆರೆ ಬೀಳಲಿದ್ದು, ಭಾರತೀಯ ಮೂಲದ ರಿಷಿ ಸುನಾಕ್ ಅವರಿಗೆ ಅವಕಾಶ ಸಿಗಲಿದೆಯಾ ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ.
ಕನ್ಸರ್ವೇಟಿವ್ ಪಕ್ಷದ ನಾಯಕರಾದ ರಿಷಿ ಸುನಾಕ್ ಹಾಗೂ ಲಿಜ್ ಪ್ರೆಸ್ ಪ್ರಧಾನಿ ಹುದ್ದೆಯ ರೇಸ್ ನಲ್ಲಿದ್ದು, ಭಾರತೀಯ ಕಾಲಮಾನ ಸೋಮವಾರ ಸಂಜೆ 4 ಗಂಟೆಗೆ ಫಲಿತಾಂಶ ಹೊರಬೀಳಲಿದೆ.
ಆರಂಭಿಕ ಹಂತದಲ್ಲಿ ಮುನ್ನಡೆ ಸಾಧಿಸಿದ್ದ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಸುನಾಕ್, ಕನ್ಸರ್ವೇಟಿವ್ ಪಕ್ಷದ ಸದಸ್ಯರು ಮತದಾನ ಮಾಡಿದ ವೇಳೆ ಹಿನ್ನಡೆ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ.
ಹೀಗಾಗಿ ಬೋರಿಸ್ ಜಾನ್ಸನ್ ಅವರ ಆಪ್ತೆ, ವಿದೇಶಾಂಗ ಸಚಿವೆ ಲಿಜ್ ಟ್ರಸ್ ಆಯ್ಕೆಯಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದ್ದು, ಇಂದು ಫಲಿತಾಂಶ ಹೊರ ಬಿದ್ದ ಬಳಿಕ ಈ ಪ್ರಶ್ನೆಗೆ ಉತ್ತರ ಸಿಗಲಿದೆ.